ಕೀರ್ತನೆಗಳು - ಅಧ್ಯಾಯ 100

123456789101112131415161718192021222324252627282930313233343536373839404142434445464748495051525354555657585960616263646566676869707172737475767778798081828384858687888990919293949596979899100101102103104105106107108109110111112113114115116117118119120121122123124125126127128129130131132133134135136137138139140141142143144145146147148149150
← ಹಿಂದಿನ ಮುಂದಿನ →
1 ಸಮಸ್ತ ಭೂಮಿಯೇ, ಕರ್ತನಿಗೆ ಜಯಧ್ವನಿ ಮಾಡಿರಿ,
2 ಸಂತೋಷ ದಿಂದ ಕರ್ತನನ್ನು ಸೇವಿಸಿರಿ; ಹಾಡುತ್ತಾ ಆತನ ಮುಂದೆ ಬನ್ನಿರಿ.
3 ಕರ್ತನೇ ದೇವರೆಂದು ತಿಳುಕೊಳ್ಳಿರಿ; ನಾವಲ್ಲ, ಆತನೇ ನಮ್ಮನ್ನು ಉಂಟು ಮಾಡಿದ್ದಾನೆ; ನಾವು ಆತನ ಜನರೂ ಆತನ ಹುಲ್ಲುಗಾವಲಿನ ಮಂದೆಯೂ ಆಗಿದ್ದೇವೆ.
4 ಕೃತಜ್ಞತೆಯಿಂದ ಆತನ ಬಾಗಿಲುಗಳಿಗೂ ಸ್ತೋತ್ರದಿಂದ ಆತನ ಅಂಗಳಗಳಿಗೂ ಬನ್ನಿರಿ; ಆತನನ್ನು ಕೊಂಡಾಡಿರಿ, ಆತನ ಹೆಸರನ್ನು ಸ್ತುತಿಸಿರಿ.
5 ಕರ್ತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.
← ಸೂಚಿಗೆ ಹಿಂದಿರುಗಿ